ಹುಷಾರು ನಿಮಗೆ ಗೊತ್ತಿಲ್ಲದೆ ನಿಮ್ಮೊಳಗೂ ಅಡಗಿರಬಹುದು ಈ ರೋಗ! ಯಾವುದನ್ನೇ ಆದ್ರೂ ಆಳವಾಗಿ ಹಚ್ಚಿಕೊಳ್ತಾ ಹೋದಂತೆ ಅದೊಂದು ಕಾಯಿಲೆಯಾಗಿ ಬೇರಿಳಿಸೋ ಅಪಾಯವೇ ಹೆಚ್ಚು. ಕೆಲವೊಮ್ಮೆ ನಾವು ಮಾಮೂಲು ಅಂದುಕೊಳ್ಳೋ ಅದೆಷ್ಟೋ ಮಾನಸಿಕ ಪಲ್ಲಟಗಳು ನಮ್ಮನ್ನೇ ಹಿಂಸೆಗೀಡುಮಾಡೋ ಅಪಾಯವಿರುತ್ತೆ. ನಿಮಗೆ ಅಚ್ಚರಿಯಾದೀತು, ಆದ್ರೆ ಸಿನಿಮಾ, ಕ್ರೀಡೆ ಸೇರಿದಂತೆ ನೀವ್ಯಾರನ್ನಾದ್ರೂ ಅಪಾರವಾಗಿ ಹಚ್ಚಿಕೊಂಡ್ರೆ ಅದೂ ಕೂಡಾ ಒಂದು ಮಾನಸಿಕ ವ್ಯಾಧಿಯಾಗಿ ಮಾರ್ಪಾಡಾಗಬಹುದು. ಇದು ವಿಚಿತ್ರವಾದ್ರೂ ಸತ್ಯ. ವಿಶ್ವದಲ್ಲಿ ಅದೆಷ್ಟೋ ಮಂದಿ ಇಂಥಾದ್ದೊಂದು ಹೇಳಿಕೊಳ್ಳಲಾರದ ಕಾಯಿಲೆಯಿಂದ ಪರಿತಪಿಸ್ತಿದ್ದಾರೆ. ಸಾಮಾನ್ಯವಾಗಿ ಸಿನಿಮಾ ತಾರೆಯರ ಬಗ್ಗೆ ವಿಪರೀತ ಅಭಿಮಾನವಿರುತ್ತೆ. ಸಿನಿಮಾಗಳಲ್ಲಿ ಅಂಥವ್ರ ಅಭಿನಯ ನೋಡಿ ಮೆಚ್ಚಿಕೊಳ್ಳೋದು, ಅವರನ್ನೊಮ್ಮೆ ಭೇಟಿಯಾಗಬೇಕಂತ ಹಂಬಲಿಸೋದೆಲ್ಲ ಮಾಮೂಲಿ. ಆದ್ರೆ ಅದನ್ನ ಮೀರಿದ ಮತ್ತೊಂದು ಹಂತವಿದೆ. ಅದು ಸೀರಿಯಸ್ಸಾಗಿ ಅಂಥಾ ತಾರೆಯರೊಂದಿಗೆ ಲವ್ವಲ್ಲಿ ಬೀಳೋ ಹಂತ. ನೀವೇನಾದ್ರು ಆ ಘಟ್ಟ ತಲುಪಿಕೊಂಡಿದ್ದೀರಾದ್ರೆ ಕೊಂಚ ಯೋಚಿಸಿ ಅದ್ರಿಂದ ಹೊರ ಬನ್ನಿ. ಯಾಕಂದ್ರೆ ಅದೊಂದು ಭ್ರಾಮಕ ಕಾಯಿಲೆ! ಇಂಥಾ ಕಾಯಿಲೆಗೆ ಮನೋ ವೈದ್ಯರು ಎರಟೋಮೇನಿಯಾ ಎಂಬ ಹೆಸರಿಟ್ಟಿದ್ದಾರೆ. ಅದೇನಾದ್ರೂ…
Author: Santhosh Bagilagadde
Santhosh Bagilagadde
Santhosh Bagilagadde is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Santhosh has worked in reputed publications like Hi Bangalore, Agni, Lankesh Patrike and Himagni.